ಎಸ್ತೇರಳು 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಸುಗಂಧತೈಲದ ಪ್ರಯೋಗದಲ್ಲಿ ಆರು ತಿಂಗಳು, ಕಾಂತಿವರ್ಧಕ ಪರಿಮಳ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳು ಹೀಗೆ ಒಂದು ವರ್ಷ ಕಳೆಯಿತು. ಇದಾದನಂತರ ಪದ್ಧತಿಯ ಪ್ರಕಾರ ಸಿಂಗರಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ತನ್ನ ಸರದಿಯಂತೆ ಅರಸನ ಬಳಿಗೆ ಹೋಗಬೇಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕನ್ಯೆಯರ ಲೇಪನಕಾಲವು ಪೂರೈಸುವದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ ಪರಿಮಳ ದ್ರವ್ಯ ಕಾಂತಿವರ್ಧಕ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳೂ ಅಂತೂ ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜಸ್ತ್ರೀಯರ ವಿಷಯವಾದ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸರದಿಯ ಪ್ರಕಾರ ಒಬ್ಬ ಕನ್ಯೆಯನ್ನು ಅರಸನ ಬಳಿಗೆ ಕರೆದೊಯ್ಯುವ ಮೊದಲು ಆಕೆಯು ಹನ್ನೆರಡು ತಿಂಗಳು ಕಾಲ ಸೌಂದರ್ಯೋಪಾಸನದ ವಿಧಿಕ್ರಮಗಳನ್ನೆಲ್ಲಾ ನೆರವೇರಿಸಿರಬೇಕು. ಆರುತಿಂಗಳ ಕಾಲ ರಕ್ತಬೋಳದ ಎಣ್ಣೆಯ ಅಭ್ಯಂಜನದಿಂದಲೂ ನಂತರದ ಆರುತಿಂಗಳು ಕಾಂತಿವರ್ಧಕ ಲೇಪನ, ಸುಗಂಧವಸ್ತುಗಳಿಂದ ಆಕೆಯು ಸೌಂದರ್ಯದ ಆರೈಕೆ ಮಾಡಿಸಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಸುಗಂಧ ತೈಲದಿಂದಲೂ ಆರು ತಿಂಗಳು ಸೌಂದರ್ಯವರ್ಧಕ ಸಾಧನಗಳಿಂದಲೂ ಕನ್ಯೆಯರ ಲೇಪನಕಾಲದ ಪ್ರಕಾರ ಹನ್ನೆರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇರೋಷನ ಬಳಿಗೆ ಪ್ರತಿಯೊಬ್ಬ ಕನ್ಯೆಯು ಹೋಗಲು ಅವರವರ ಸರದಿ ಬರುತ್ತಿತ್ತು. ಅಧ್ಯಾಯವನ್ನು ನೋಡಿ |