16 ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳಿಕೆಯ ಏಳನೆಯ ವರುಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರತಂದರು. ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು.
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.
ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.
ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು.