ಎಸ್ತೇರಳು 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತನ್ನ ಎಲ್ಲಾ ಪದಾಧಿಕಾರಿಗಳಿಗೂ ಪರಿವಾರದವರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ಭಾರಿ ಔತಣವನ್ನೇರ್ಪಡಿಸಿದನು. ತನ್ನ ಎಲ್ಲಾ ಸಂಸ್ಥಾನಗಳಲ್ಲಿ, ಸೆರೆಯಲ್ಲಿದ್ದ ಬಂಧಿತರಿಗೆ ಬಿಡುಗಡೆಯನ್ನು ಘೋಷಿಸಿದನು. ರಾಜಮರ್ಯಾದೆಗೆ ತಕ್ಕಂತೆ ಪ್ರಜೆಗಳಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತನ್ನ ಎಲ್ಲಾ ಸರದಾರರಿಗೂ ಪರಿವಾರದವರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ ರಾಜರಿಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎಸ್ತೇರಳಿಗೆ ರಾಜನು ಒಂದು ದೊಡ್ಡ ಔತಣವನ್ನೇರ್ಪಡಿಸಿ ಅದಕ್ಕೆ ರಾಜ್ಯದ ಮುಖ್ಯ ಅಧಿಕಾರಿಗಳನ್ನೂ ನಾಯಕರನ್ನೂ ಆಮಂತ್ರಿಸಿ, ರಾಜ್ಯದಲ್ಲೆಲ್ಲಾ ಒಂದು ದಿವಸದ ರಜೆಯನ್ನು ಘೋಷಿಸಿದನು; ಮತ್ತು ಜನರಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಎಲ್ಲಾ ಪ್ರಾಂತಗಳಿಗೂ ರಜೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |