Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈ ವಿಷಯ ವಿಚಾರಣೆಗೆ ಬಂದು ಅದು ಸತ್ಯಸಂಗತಿಯೆಂದು ರುಜುವಾತು ಆಗಲು, ಆ ಇಬ್ಬರು ಪಿತೂರಿಗಾರರನ್ನು ಗಲ್ಲಿಗೇರಿಸಲಾಯಿತು. ಈ ಸಂಗತಿಯನ್ನು ರಾಜನ ದಿನಚರಿಯ ಪುಸ್ತಕದಲ್ಲಿ ಬರೆದಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸ್ಥಾಪನೆಯಾದದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿದರು. ಆ ಸಂಗತಿಯು ರಾಜನ ದಿನಚರ್ಯಪುಸ್ತಕದಲ್ಲಿ ಬರೆಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕೂಡಲೇ ವಿಚಾರಣೆ ನಡೆಸಿದಾಗ ಮೊರ್ದೆಕೈಯು ಹೇಳಿದ ವಿಷಯವು ಸತ್ಯ ಎಂದು ಗೊತ್ತಾಯಿತು. ಆ ಎರಡು ದ್ವಾರಪಾಲಕರನ್ನು ಹಿಡಿದು ಗಲ್ಲಿಗೇರಿಸಿದರು. ಈ ಎಲ್ಲಾ ಸಮಾಚಾರವನ್ನು ರಾಜನ ಬಳಿಯಲ್ಲಿರುವ ರಾಜಕಾಲ ವೃತ್ತಾಂತ ಪುಸ್ತಕದಲ್ಲಿ ಬರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಈ ವಿಷಯ ವಿಚಾರಣೆಗೆ ಬಂದಾಗ ನಿಜವೆಂದು ಗೊತ್ತಾಯಿತು. ಆಗ ಆ ಇಬ್ಬರು ಅಧಿಕಾರಿಗಳನ್ನೂ ಗಲ್ಲಿಗೇರಿಸಲಾಯಿತು. ಇವೆಲ್ಲವನ್ನೂ ಅರಸನ ಮುಂದೆ ಇರುವ ರಾಜನ ಇತಿಹಾಸಗಳ ಪುಸ್ತಕದಲ್ಲಿ ಬರೆದಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:23
11 ತಿಳಿವುಗಳ ಹೋಲಿಕೆ  

ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ, ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರಗಳು ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.


ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.


ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.


ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.


ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು