Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಂದೆತಾಯಿಗಳನ್ನು ಕಳೆದುಕೊಂಡು ಅನಾಥಳಾಗಿದ್ದ ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳನ್ನು (ಹದೆಸ್ಸಾ ಆಕೆಯ ಇನ್ನೊಂದು ಹೆಸರು) ತನ್ನ ಸ್ವಂತ ಮಗಳಂತೆ ಸ್ವೀಕರಿಸಿ ಸಾಕುತ್ತಿದ್ದನು. ಈಕೆ ಬಲು ರೂಪಸಿ ಹಾಗು ಲಾವಣ್ಯವತಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವನು ಎಸ್ತೇರಳೆಂಬ ಹೆಸರನ್ನು ಪಡೆದ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆ ತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಈಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇವನ ಬಳಿಯಲ್ಲಿ ಇವನ ಚಿಕ್ಕಪ್ಪನ ಮಗಳಾದ ಹದೆಸ್ಸಾ ಎಂಬ ಕನ್ನಿಕೆ ಇದ್ದಳು. ಈಕೆ ತಂದೆಯೂ ತಾಯಿಯೂ ಇಲ್ಲದ ತಬ್ಬಲಿಯಾಗಿದ್ದಳು. ಈಕೆಯ ತಂದೆತಾಯಿಗಳು ಸತ್ತಂದಿನಿಂದ ಈಕೆಯನ್ನು ಮೊರ್ದೆಕೈಯು ತನ್ನ ಮಗಳನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಹದೆಸ್ಸಾಳನ್ನು ಎಸ್ತೇರ್ ಎಂಬ ಹೆಸರಿನಿಂದಲೂ ಕರೆಯುತ್ತಿದ್ದರು. ತುಂಬಾ ಸೌಂದರ್ಯವತಿಯಾಗಿದ್ದ ಈಕೆ ಆಕರ್ಷಕಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರ್ ಎಂಬ ಹೆಸರನ್ನು ಪಡೆದ ಹದೆಸ್ಸಳನ್ನು ಸಾಕುತ್ತಿದ್ದನು. ಏಕೆಂದರೆ ಅವಳಿಗೆ ತಂದೆತಾಯಿಗಳು ಇರಲಿಲ್ಲ. ಈಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆತಾಯಿಗಳು ಸತ್ತು ಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:7
12 ತಿಳಿವುಗಳ ಹೋಲಿಕೆ  

ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.


ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


“ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.


ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.


ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ.


ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.


ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ, ನಾನೊಬ್ಬನೇ ತಿಂದೆನೋ?


ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು