ಎಸ್ತೇರಳು 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದನಂತರ ಅರಸ ಅಹಷ್ವೇರೋಷನು ಆಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮಸ್ಥಾನವನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು. ಅಧ್ಯಾಯವನ್ನು ನೋಡಿ |