ಎಸ್ತೇರಳು 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆ ಬೆಳ್ಳಿ ನಿನ್ನಲ್ಲೇ ಇರಲಿ: ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅರಸನು ಹಾಮಾನನಿಗೆ, “ನಿನ್ನ ಹಣವು ನಿನ್ನ ಹತ್ರವೇ ಇರಲಿ. ಆ ಜನರನ್ನು ನಿನಗೆ ಇಷ್ಟಬಂದ ಹಾಗೆ ಮಾಡಬಹುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು. ಅಧ್ಯಾಯವನ್ನು ನೋಡಿ |
ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.