Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ - ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನ ಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಮುದುಕರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ, ಅವರ ಸೊತ್ತನ್ನು ಸೂರೆಮಾಡಿರಿ ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:13
14 ತಿಳಿವುಗಳ ಹೋಲಿಕೆ  

ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.


ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.


ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.


ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.


ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.


ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.


ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.


ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು