Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೊರ್ದೆಕೈಯು ತನಗೆ ಬಾಗಿ ನಮಸ್ಕಾರ ಮಾಡದಿದ್ದುದನ್ನು ಕಂಡು ಹಾಮಾನನು ಅವನ ಮೇಲೆ ಕಡುಗೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುವದಿಲ್ಲವೆಂದು ಹಾಮಾನನು ನೋಡಿ ಬಹು ಕೋಪವುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೊರ್ದೆಕೈ ತನಗೆ ಅಡ್ಡಬೀಳದಿರುವುದರಿಂದ ಮತ್ತು ಗೌರವಿಸದಿರುವುದರಿಂದ ಹಾಮಾನನು ಬಹಳ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಮಾನನು, ಮೊರ್ದೆಕೈಯು ತನಗೆ ಬಗ್ಗಿ ಅಡ್ಡಬೀಳದೆ ಇರುವುದನ್ನು ಕಂಡಾಗ ಬಹು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:5
13 ತಿಳಿವುಗಳ ಹೋಲಿಕೆ  

ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.


ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.


“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.


ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.


ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.


ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.


ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.


ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.


ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.


ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.


ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು