ಎಸ್ತೇರಳು 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅರಸರಿಗೆ ಸಮ್ಮತಿ ಆದರೆ ಅವರನ್ನು ನಿರ್ಮೂಲಮಾಡುವಂತೆ ಆಜ್ಞೆ ಒಂದನ್ನು ಹೊರಡಿಸಬೇಕು. ಹಾಗೆ ಮಾಡಿದ್ದಲ್ಲಿ, ನಾನು ರಾಜಭಂಡಾರಕ್ಕಾಗಿ 340,000 ಕಿಲೋಗ್ರಾಂ ಬೆಳ್ಳಿಯನ್ನು ಖಜಾಂಚಿಯರ ಕೈಗೊಪ್ಪಿಸುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅರಸನ ಚಿತ್ತ ಬಂದರೆ ಅವರನ್ನು ಸಂಹರಿಸಬೇಕು ಎಂಬ ರಾಯಸವು ಹೊರಡಲಿ; ಹಾಗೆ ಮಾಡಿದರೆ ನಾನು ರಾಜ ಭಂಡಾರಗಳಿಗೆ ಸೇರಿಸುವದಕ್ಕೋಸ್ಕರ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ರಾಜನೇ, ನೀನು ಸಮ್ಮತಿಸುವದಾದರೆ ನನ್ನ ಸಲಹೆ ಏನೆಂದರೆ, ಆ ಜನರನ್ನು ನಿರ್ಮೂಲ ಮಾಡಲು ಅಪ್ಪಣೆ ಕೊಡು. ನಾನು ಹತ್ತು ಸಾವಿರ ಬೆಳ್ಳಿನಾಣ್ಯಗಳನ್ನು ರಾಜ ಖಜಾನೆಯಲ್ಲಿ ಹಾಕುವೆನು. ಆ ಹಣವನ್ನು ಆ ಕಾರ್ಯ ಮಾಡುವ ಜನರ ಸಂಬಳಕ್ಕಾಗಿ ವಿನಿಯೋಗಿಸಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿ |
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.