Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಡೆದ ಸಂಗತಿಯನ್ನೆಲ್ಲಾ ಕೇಳಿದಾಗ, ಮೊರ್ದೆಕೈ ತನ್ನ ಬಟ್ಟೆಗಳನ್ನು ಹರಿದು ಗೋಣಿತಟ್ಟನ್ನು ಉಟ್ಟು, ಬೂದಿಯನ್ನು ಸುರಿದುಕೊಂಡು ನಗರದ ಮಧ್ಯೆ ಹೋಗುತ್ತಾ ಅಪಾರ ದುಃಖದಿಂದ ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ಬಟ್ಟೆಗಳನ್ನು ಹರಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ದುಃಖಾತಿಶಯದಿಂದ ಗೋಳಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಡೆದ ಎಲ್ಲಾ ಸಂಗತಿಗಳನ್ನು ಮೊರ್ದೆಕೈ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:1
27 ತಿಳಿವುಗಳ ಹೋಲಿಕೆ  

ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ


ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.


ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು;


ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.


ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.


“ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.


ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.


ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,


ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.


ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.


ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು,


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”


ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು.


ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.


ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.


ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.


ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು