Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೊರ್ದೆಕೈ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನೆಂದರೆ, ರಾಜನು ಕರೆಯದೆ ಯಾರಾದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡವನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:11
9 ತಿಳಿವುಗಳ ಹೋಲಿಕೆ  

ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.


ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು.


ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ.


ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.


ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.


ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.


ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ,


ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು