Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:14
31 ತಿಳಿವುಗಳ ಹೋಲಿಕೆ  

ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.


ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.


ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.


ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.


ಆಗ ದಾವೀದನು, “ನಾನೇನು ತಪ್ಪು ಮಾಡಿದೆನು? ಸುಮ್ಮನೆ ಮಾತನಾಡಿದೆನಷ್ಟೆ” ಎಂದು ಹೇಳಿ


ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.


ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ.


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಅವನು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ.


ಆಗ ಎಸ್ತೇರಳು ಮೊರ್ದೆಕೈಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು;


ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು.


ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು