Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದೇ ಸ್ಥಿತಿಯಲ್ಲಿ ಅರಮನೆಯ ಹೆಬ್ಬಾಗಿಲವರೆಗೂ ಬಂದನು. ಗೋಣಿತಟ್ಟನ್ನು ಉಟ್ಟವರು ಯಾರೂ ಒಳಗೆ ಪ್ರವೇಶಿಸಕೂಡದೆಂಬ ನಿಷೇಧಾಜ್ಞೆ ಜಾರಿಯಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಮನೆಯ ಹೆಬ್ಬಾಗಲಿನ ಮುಂದೆ ಬಂದನು; ಗೋಣಿತಟ್ಟು ಕಟ್ಟಿಕೊಂಡವರು ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಶೋಕವನ್ನು ಸೂಚಿಸುವ ಬಟ್ಟೆಗಳನ್ನು ಧರಿಸಿದ್ದ ಕಾರಣ ಅರಮನೆಯ ಹೆಬ್ಬಾಗಿಲ ತನಕ ಮಾತ್ರವೇ ಅವನಿಗೆ ಹೋಗಲು ಸಾಧ್ಯವಾಯಿತು. ಅರಮನೆಯ ಪ್ರಾಕಾರದೊಳಗೆ ಶೋಕವಸ್ತ್ರವನ್ನು ಧರಿಸಿ ಯಾರೂ ಹೋಗುವ ಹಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅರಸನ ಅರಮನೆಯ ಬಾಗಿಲಿನವರೆಗೆ ಬಂದನು. ಏಕೆಂದರೆ ಗೋಣಿತಟ್ಟನ್ನು ಉಟ್ಟುಕೊಂಡು ಅರಸನ ಅರಮನೆಯ ಬಾಗಿಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:2
4 ತಿಳಿವುಗಳ ಹೋಲಿಕೆ  

ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.


ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.


ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,


ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು