Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೆ, ಹತಾಕನು ಅರಮನೆಯ ಹೆಬ್ಬಾಗಿಲ ಮುಂದಿರುವ ನಗರದ ಬಯಲಿಗೆ, ಮೊರ್ದೆಕೈಯನ ಬಳಿಗೆ ಹೋದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹತಾಕನು ಅರಮನೆಯ ಬಾಗಲಿನ ಮುಂದಿರುವ ಪಟ್ಟಣದ ಬೈಲಿಗೆ ಮೊರ್ದೆಕೈಯ ಹತ್ತಿರ ಹೋದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅರಮನೆಯ ಹೆಬ್ಬಾಗಿಲು ಎದುರಿನಲ್ಲಿದ್ದ ಬಯಲಿನಲ್ಲಿ ಮೊರ್ದೆಕೈಯನ್ನು ಹತಾಕನು ಸಂಧಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಿಲ ಮುಂದೆ ಪಟ್ಟಣದ ಬೀದಿಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:6
5 ತಿಳಿವುಗಳ ಹೋಲಿಕೆ  

ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.


ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.


ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.


ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು