ಎಸ್ತೇರಳು 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಲ್ಲದೆ ಯೆಹೂದ್ಯರನ್ನೆಲ್ಲಾ ಸಂಹರಿಸಬಿಡುವುದಕ್ಕೋಸ್ಕರ ಶೂಷನ್ ನಗರದಲ್ಲಿ ಪ್ರಕಟಗೊಂಡ ರಾಜಶಾಸನದ ಒಂದು ಪ್ರತಿಯನ್ನು ಅವನ ಕೈಗಿತ್ತನು. ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ ಆಕೆ ಅರಸನ ಸಮ್ಮುಖಕ್ಕೆ ಹೋಗಿ, ಆತ ದಯೆತೋರುವಂತೆ ಆತನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹಮಾಡುವಂತೆ ಆಕೆಗೆ ತಿಳಿಸಬೇಕೆಂತಲೂ ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತಮ್ಮನ್ನು ಸಂಹರಿಸುವದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು - ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೂದ್ಯರನ್ನು ನಾಶಮಾಡಲು ಶೂಷನಿನಲ್ಲಿ ಪ್ರಕಟಗೊಂಡ ರಾಜಾಜ್ಞೆಯ ಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ, ಅವಳು ತನ್ನ ಜನರಿಗಾಗಿ ಅರಸನ ಮುಂದೆ ಹೋಗಿ ಬಿನ್ನಹ ಮಾಡುವಂತೆಯೂ ಆಕೆಗೆ ತಿಳಿಸಲು ಹೇಳಿದನು. ಅಧ್ಯಾಯವನ್ನು ನೋಡಿ |