Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರತ್ಯುತ್ತರವಾಗಿ ಎಸ್ತೇರಳು, “ಅರಸರ ಚಿತ್ತವಾದರೆ ನಾನು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ತಾವು ಹಾಮಾನನೊಂದಿಗೆ ದಯಮಾಡಿಸಬೇಕು,” ಎಂದು ವಿನಂತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ಎಸ್ತೇರಳು - ಅರಸನ ಚಿತ್ತಕ್ಕೆ ಬಂದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ ಎಂದು ಅರಿಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಎಸ್ತೇರಳು, “ನಾನು ಒಂದು ಔತಣವನ್ನು ಸಿದ್ಧಪಡಿಸಿರುತ್ತೇನೆ. ಅದಕ್ಕೆ ನೀವೂ, ಹಾಮಾನನೂ ಬರಬೇಕು ಎಂದು ವಿನಂತಿಸುತ್ತೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಎಸ್ತೇರಳು ಅರಸನಿಗೆ, “ಸಮ್ಮತಿಯಾದರೆ ನಾನು ಅರಸನಿಗಾಗಿ ಸಿದ್ಧಮಾಡಿಸಿರುವ ಔತಣಕ್ಕೆ ಅರಸನೂ ಹಾಮಾನನೂ ಈ ಹೊತ್ತು ಬರಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:4
10 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.


ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.


ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.


ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.


ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.


ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.


ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು