ಎಸ್ತೇರಳು 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು. ನಾನದನ್ನು ನೆರವೇರಿಸುವೆನು. ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದ್ರಾಕ್ಷಾರಸಪಾನ ಮಾಡುವಾಗ ಅರಸನು ತಿರಿಗಿ ಎಸ್ತೇರಳಿಗೆ - ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಅನ್ನಲು ಎಸ್ತೇರಳು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರು ದ್ರಾಕ್ಷಾರಸವನ್ನು ಸೇವಿಸುತ್ತಿರುವಾಗ ರಾಜನು ಎಸ್ತೇರಳನ್ನು ತಿರಿಗಿ ವಿಚಾರಿಸಿದನು, “ನೀನು ನನ್ನನ್ನು ಏನು ಕೇಳಬೇಕೆಂದಿದ್ದೀ? ಏನೂ ಬೇಕಾದರೂ ಕೇಳು. ನಾನು ಕೊಡುತ್ತೇನೆ. ಹೇಳು ಏನುಬೇಕು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಾನು ಕೊಡುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿ |