Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆ ಬರಲಿಲ್ಲ; ಆದದರಿಂದ ಸ್ಮರಿಸತಕ್ಕ ಪೂರ್ವವೃತ್ತಾಂತಗಳ ಗ್ರಂಥವನ್ನು ಅವನು ತರಿಸಿ ಪಾರಾಯಣಮಾಡಿಸುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:1
12 ತಿಳಿವುಗಳ ಹೋಲಿಕೆ  

ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.


ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ, ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರಗಳು ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.


ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.


ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.


ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು