ಎಸ್ತೇರಳು 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು, ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಹಾಕಿಸಬೇಕು. ಅನಂತರ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ’ ಎಂದು ಪ್ರಕಟಣೆ ಮಾಡಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನ ಸವಾರರಲ್ಲೊಬ್ಬನ ವಶಕ್ಕೆ ಕೊಡಬೇಕು; ಇವನು, ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿ, ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆಮಾಡಿಸುತ್ತಾ, ಅವನ ಮುಂದೆ ‘ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ’ ಎಂದು ಪ್ರಕಟಿಸಬೇಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಧಾರಣೆಮಾಡಿಸಿ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಮಧ್ಯದಲ್ಲಿ ಮೆರವಣಿಗೆಮಾಡಿಸುತ್ತಾ ಅವನ ಮುಂದೆ - ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ ಎಂದು ಪ್ರಕಟಣೆಮಾಡಿಸಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅನಂತರ ಅರಸನ ಮುಖ್ಯ ಅಧಿಕಾರಿಗಳಲ್ಲೊಬ್ಬನನ್ನು ರಾಜವಸ್ತ್ರಗಳಿಗೂ ಕುದುರೆಗೂ ಜವಾಬ್ದಾರನನ್ನಾಗಿ ನೇಮಿಸಿರಿ. ರಾಜನು ಯಾವ ವ್ಯಕ್ತಿಯನ್ನು ಗೌರವಿಸಬೇಕೆಂದಿದ್ದಾನೋ ಆ ವ್ಯಕ್ತಿಯ ಮೇಲೆ ಅವನು ರಾಜವಸ್ತ್ರವನ್ನು ಹಾಕಲಿ. ಆಮೇಲೆ ಅವನನ್ನು ಕುದುರೆಯ ಮೇಲೆ ಕುಳ್ಳಿರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ‘ರಾಜನು ಗೌರವಿಸುವ ಮನುಷ್ಯನಿಗೆ ಹೀಗೆಯೇ ಆಗುವುದು’ ಎಂದು ಪ್ರಕಟಿಸುತ್ತಾ ಹೋಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನರಲ್ಲಿ ಒಬ್ಬನ ವಶಕ್ಕೆ ಕೊಡಬೇಕು. ಇವನು ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿದ ತರುವಾಯ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!’ ಎಂದು ಪ್ರಕಟಿಸಬೇಕು,” ಎಂದನು. ಅಧ್ಯಾಯವನ್ನು ನೋಡಿ |