ಎಸ್ತೇರಳು 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಲ್ಲದೆ, ಅರಸನ ಸೀಮೆಯಲ್ಲಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಸಮಾಚಾರವನ್ನು ತಿಳಿಸಿದ ಮೊರ್ದಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಸಿದ್ಧಮಾಡಿಸಿದ ಇಪ್ಪತ್ತೆರಡು ಮೀಟರ್ ಎತ್ತರದ ನೇಣುಗಂಬವಿದೆಯಲ್ಲ,” ಎನ್ನಲು ಅರಸನು, “ಇವನನ್ನು ಅದಕ್ಕೆ ನೇತುಹಾಕಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು - ಇಗೋ ಈ ಹಾಮಾನನ ಮನೆಯ ಹತ್ತಿರ ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಇವನಿಂದ ಸಿದ್ಧಮಾಡಲ್ಪಟ್ಟ ಐವತ್ತು ಮೊಳ ಎತ್ತರವಾದ ಗಲ್ಲು ಮರವಿರುತ್ತದಲ್ಲಾ ಅನ್ನಲು ಅರಸನು - ಇವನನ್ನು ಅದಕ್ಕೆ ನೇತುಹಾಕಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ರಾಜಕಂಚುಕಿಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ ಬಂದು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಮಾತಾಡಿದ ಮೊರ್ದೆಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಮಾಡಿಸಿದ ಇಪ್ಪತ್ತೆರಡು ಮೀಟರ್ ಗಲ್ಲುಮರವು ಹಾಮಾನನ ಮನೆಯ ಹತ್ತಿರ ಇದೆ,” ಎಂದನು. ಅದಕ್ಕೆ ಅರಸನು, “ಇವನನ್ನು ಅದರಲ್ಲಿ ನೇತುಹಾಕಿರಿ” ಎಂದನು. ಅಧ್ಯಾಯವನ್ನು ನೋಡಿ |