Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೆ ಸಿದ್ಧರಾಗಿರಬೇಕು” ಎಂದು ಅಪ್ಪಣೆಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿರ್ನಾಮಗೊಳಿಸಿ ಅವರ ಆಸ್ತಿಪಾಸ್ತಿಯನ್ನೆಲ್ಲಾ ಸೂರೆಮಾಡಬೇಕು; ಈ ಪತ್ರದ ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜಾಜ್ಞೆಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು. ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಸನ್ನದ್ಧರಾಗಿರಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕೆಂದೂ ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವದಕ್ಕೆ ಸಿದ್ಧರಾಗಿರಬೇಕೆಂದೂ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ರಾಜಾಜ್ಞೆಯು ದೇಶದ ಶಾಸನವಾಯಿತು. ಇದನ್ನು ರಾಜ್ಯದ ಎಲ್ಲಾ ಸಂಸ್ಥಾನಗಳ ಎಲ್ಲಾ ಜನರಿಗೆ ಪ್ರಕಟಿಸಲಾಯಿತು. ಯಾವ ದಿವಸದಲ್ಲಿ ಯೆಹೂದ್ಯರನ್ನು ನಿರ್ಮೂಲ ಮಾಡಲು ಆಜ್ಞೆ ಹೊರಡಿತ್ತೋ ಆ ದಿವಸದಲ್ಲಿಯೆ ಯೆಹೂದ್ಯರು ತಮ್ಮ ವೈರಿಗಳನ್ನು ಎದುರಿಸಿ ಅವರನ್ನು ಕೊಲ್ಲುವುದಕ್ಕೆ ತಯಾರಿರಬೇಕೆಂದು ಈ ಆಜ್ಞೆಯನ್ನು ಹೊರಡಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು, ಅವರು ಆ ದಿನ ಸಿದ್ಧವಾಗಿರಬೇಕೆಂದು ಈ ಆಜ್ಞಾಪತ್ರದ ಪ್ರತಿಯು ಪ್ರಾಂತ ಪ್ರಾಂತಗಳಲ್ಲಿ ಕಾನೂನಾಗಿ ಸಕಲ ದೇಶದವರಿಗೂ ಸಾರಿ ಹೇಳಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:13
9 ತಿಳಿವುಗಳ ಹೋಲಿಕೆ  

ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.


ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?


ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು” ಎಂದು ನುಡಿದನು.


ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,


ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು