ಎಸ್ತೇರಳು 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನನ್ನನ್ನು ಮೆಚ್ಚಿ ನಾನು ಹೇಳುವ ಮಾತು ಉಚಿತವಾದದ್ದೆಂದೆಣಿಸಿ ಅದಕ್ಕೆ ಸಮ್ಮತಿಸುವದಾದರೆ ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವದರ ವಿಷಯವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರಿಸಿದ ಪತ್ರಗಳನ್ನು ರದ್ದುಮಾಡುವದಕ್ಕಾಗಿ ರಾಯಸವನ್ನು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಈ ಬಿನ್ನಹವನ್ನು ಪೂರೈಸಬೇಕು. ಅದೇನೆಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದುಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು. ಅಧ್ಯಾಯವನ್ನು ನೋಡಿ |