ಎಸ್ತೇರಳು 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅರಸನ ಹೆಸರಿನಲ್ಲಿ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ರದ್ದುಮಾಡಲಾಗದು. ಆದ್ದರಿಂದ ಯೆಹೂದ್ಯರ ವಿಷಯದಲ್ಲಿ ನಿಮಗೆ ಸರಿತೋರಿದಂತೆ ಅರಸನ ಹೆಸರಿನಲ್ಲಿ ನೀವೂ ಪತ್ರ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಕೂಡದಷ್ಟೆ. ಹೀಗಿರುವದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವದನ್ನು ಅರಸನ ಹೆಸರಿನಲ್ಲಿ ನೀವು ಬರೆಯಿಸಿ ರಾಜ ಮುದ್ರೆಯನ್ನು ಹಾಕಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈಗ ಇನ್ನೊಂದು ರಾಜಾಜ್ಞೆಯನ್ನು ಬರೆಯಿಸಲು ನಾನು ನಿಮಗೆ ಅಧಿಕಾರ ಕೊಡುತ್ತೇನೆ. ನಿಮಗೆ ಸರಿತೋಚುವ ರೀತಿಯಲ್ಲಿ ಯೆಹೂದ್ಯರಿಗೆ ಸಹಾಯವಾಗುವಂತೆ ಆ ಆಜ್ಞೆಯನ್ನು ರಾಜನ ಅಧಿಕಾರದೊಡನೆ ಬರೆಯಿಸಿ, ರಾಜನ ಉಂಗುರದಿಂದ ಮುದ್ರೆ ಒತ್ತಿರಿ. ರಾಜ ಮುದ್ರೆಯುಳ್ಳ ಯಾವ ಆಜ್ಞೆಯೂ ರದ್ದಾಗಕೂಡದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.