Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಯೆಹೂದ್ಯರು ಶೂಷನ್ ನಗರದಲ್ಲೇ ಐನೂರು ಮಂದಿಯನ್ನು, ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ. ಉಳಿದ ರಾಜಸಂಸ್ಥಾನಗಳಲ್ಲಿ ಇನ್ನೆಷ್ಟುಮಂದಿಯನ್ನು ಹತಮಾಡಿರಬಹುದೋ! ನಿನ್ನ ವಿಜ್ಞಾಪನೆ ಯಾವುದಿದ್ದರೂ ನೆರವೇರಿಸುವೆನು ಕೇಳು, ನೀನು ಏನು ಕೇಳಿದರೂ ಕೊಡುವೆನು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅರಸನು ಎಸ್ತೇರ್‍ರಾಣಿಗೆ - ಯೆಹೂದ್ಯರು ಶೂಷನ್‍ಕೋಟೆಯಲ್ಲೇ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಮಂದಿ ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವದಿದ್ದರೂ ನೆರವೇರುವದು, ನೀನು ಏನು ಕೇಳಿಕೊಂಡರೂ ಕೊಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮತ್ತು ರಾಣಿಯಾದ ಎಸ್ತೇರಳಿಗೆ, “ಶೂಷನ್‌ನಲ್ಲಿ ಯೆಹೂದ್ಯರು ಹಾಮಾನನ ಹತ್ತು ಗಂಡುಮಕ್ಕಳೂ ಸೇರಿಸಿ ಐನೂರು ಮಂದಿಯನ್ನು ಕೊಂದಿದ್ದಾರೆ. ಇನ್ನು ಬೇರೆ ಸಂಸ್ಥಾನಗಳಲ್ಲಿ ನಿನಗೇನಾಗಬೇಕು? ನನಗೆ ಹೇಳು. ನಾನು ಹಾಗೆಯೇ ಮಾಡಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತಗಳಲ್ಲಿ ಏನು ಮಾಡಿರಬಹುದೋ? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲಾಗುವುದು. ಇನ್ನೂ ನಿನ್ನ ಬೇಡಿಕೆ ಏನು? ಅದು ಮಾಡಲಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:12
6 ತಿಳಿವುಗಳ ಹೋಲಿಕೆ  

ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.


ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.


ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.


ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.


ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು