Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್‍ಕೋಟೆಯಲ್ಲಿ ಪ್ರಕಟವಾಯಿತು. ಮತ್ತು ಹಾಮಾನನ ಹತ್ತು ಮಂದಿ ಮಕ್ಕಳನ್ನು ಗಲ್ಲಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದೇ ರೀತಿ ಅರಸನು ಆಜ್ಞಾಪಿಸಿದನು. ರಾಜಾಜ್ಞೆಯು ಇನ್ನೊಂದು ದಿವಸ ಮುಂದುವರಿಯಿತು ಮತ್ತು ಹಾಮಾನನ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:14
9 ತಿಳಿವುಗಳ ಹೋಲಿಕೆ  

ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.


ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.


ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”


ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.


ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು