Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಂದೂ ಒಟ್ಟಾಗಿ ಸೇರಿ ಮುನ್ನೂರು ಮಂದಿಯನ್ನು ಕೊಂದುಹಾಕಿದರು. ಆದರೆ ಸುಲಿಗೆಗೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಶೂಷನಿನ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನದಲ್ಲೂ ಕೂಡಿಕೊಂಡು ಅಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಕೊಳ್ಳೆಗೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಶೂಷನ್ ನಗರದಲ್ಲಿದ್ದ ಯೆಹೂದ್ಯರು ಅದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ಆ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿಪಾಸ್ತಿಯನ್ನು ಮುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:15
10 ತಿಳಿವುಗಳ ಹೋಲಿಕೆ  

ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.


ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.


ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.


ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.


ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.


ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು