ಎಸ್ತೇರಳು 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದು ನಡೆದದ್ದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ. ಅವರು ಹದಿನಾಲ್ಕನೆಯ ದಿನದಂದು ವಿಶ್ರಮಿಸಿದರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದು ಫಾಲ್ಗುನಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರವಿುಸಿಕೊಂಡು ಆ ದಿವಸವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಈ ಕಾರ್ಯವು ನಡೆಯಿತು. ಹದಿನಾಲ್ಕನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಆ ದಿವಸವನ್ನು ಯೆಹೂದ್ಯರು ತಮ್ಮ ಸಂತಸದ ದಿನವಾಗಿ ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು. ಅಧ್ಯಾಯವನ್ನು ನೋಡಿ |
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.