Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶೂಷನಿನ ಯೆಹೂದ್ಯರು ಹದಿಮೂರನೇ ಹಾಗೂ ಹದಿನಾಲ್ಕನೇ ದಿನ ಒಟ್ಟಾಗಿ ಸೇರಿಬಂದುದರಿಂದ, ಅವರು ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳಲ್ಲಿ [ವೈರಿಗಳನ್ನು ವಧಿಸುವದಕ್ಕೆ] ಕೂಡಿಕೊಂಡಿದ್ದದರಿಂದ ಹದಿನೈದನೆಯ ದಿನದಲ್ಲಿ ವಿಶ್ರವಿುಸಿಕೊಂಡು ಆ ದಿನವನ್ನು ಉತ್ಸವಭೋಜನದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದಾರ್ ತಿಂಗಳಿನ ಹದಿಮೂರನೇ ಮತ್ತು ಹದಿನಾಲ್ಕನೇ ದಿವಸಗಳಲ್ಲಿ ಶೂಷನ್ ನಗರದ ಯೆಹೂದ್ಯರು ಒಟ್ಟಾಗಿ ಸೇರಿಬಂದಿದ್ದರಿಂದ ಹದಿನೈದನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಹದಿನೈದನೆಯ ದಿವಸವನ್ನು ಅವರು ಸಂತಸದ ಹಬ್ಬವನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:18
7 ತಿಳಿವುಗಳ ಹೋಲಿಕೆ  

ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.


ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.


ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.


ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.


ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.


ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.


ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು