ಎಸ್ತೇರಳು 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದದರಿಂದ ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿವಸವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು. ಅಧ್ಯಾಯವನ್ನು ನೋಡಿ |