ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.
ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.
ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.
ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.