ಎಸ್ತೇರಳು 9:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿಯುಂಟಾಯಿತು; ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂತು. ಆದದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸಿ ಬಡವರಿಗೆ ದಾನಧರ್ಮಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು. ಅಧ್ಯಾಯವನ್ನು ನೋಡಿ |