ಎಸ್ತೇರಳು 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 (ಇದು ಅರಸನ ಮುಂದೆ ಬಂದಾಗ ಅವನು - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕೆಂದು ಅಪ್ಪಣೆ ಮಾಡಿದನಷ್ಟೆ. ) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು; ಅಧ್ಯಾಯವನ್ನು ನೋಡಿ |