ಎಸ್ತೇರಳು 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಅಧಿಕಾರ ಪ್ರಬಲವಾಗುತ್ತಾ ಬಂದುದರಿಂದ ಅವನ ಕೀರ್ತಿ ಎಲ್ಲಾ ಸಂಸ್ಥಾನಗಳಲ್ಲಿಯೂ ಹಬ್ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಗಿತ್ತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದಹಾಗೆಲ್ಲಾ ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಲ್ಲದೆ ಸಂಸ್ಥಾನಗಳಲ್ಲಿದ್ದ ಅಧಿಕಾರಿಗಳು, ರಾಜ್ಯಪಾಲರು, ಆಡಳಿತಾಧಿಕಾರಿಗಳು ಯೆಹೂದ್ಯರಿಗೆ ನೆರವಾದರು. ಯಾಕೆಂದರೆ ಅವರು ಮೊರ್ದೆಕೈಗೆ ಹೆದರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು. ಅಧ್ಯಾಯವನ್ನು ನೋಡಿ |
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.