Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದಯೆ ಹಾಗೂ ಸತ್ಯತೆಯ ಮಾತುಗಳಿಂದ ತುಂಬಿದ್ದ ಆ ಪತ್ರಗಳಲ್ಲಿ ಎಸ್ತೇರಳು, “ಯೆಹೂದ್ಯರು ತಾವೂ ತಮ್ಮ ಸಂತತಿಯವರೆಲ್ಲರೂ ಉಪವಾಸ, ಪ್ರಲಾಪದಿನಗಳನ್ನು ಪ್ರತಿವರ್ಷ ತಪ್ಪದೆ ಆಚರಿಸಬೇಕು; ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರಿಮ್ ದಿನಗಳನ್ನು ತನ್ನ ಮತ್ತು ಯೆಹೂದ್ಯನಾದ ಮೊರ್ದಕೈಯ ಆದೇಶದಂತೆ ಪ್ರತಿವರ್ಷವೂ ನಿಯಮಿತ ಕಾಲದಲ್ಲಿ ತಪ್ಪದೆ ಆಚರಿಸಬೇಕು,” ಎಂದು ಬರೆದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ - ಯೆಹೂದ್ಯರು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ಉಪವಾಸಪ್ರಲಾಪ ದಿನಗಳನ್ನು ಪ್ರತಿವರುಷ ತಪ್ಪದೆ ಆಚರಿಸಬೇಕೆಂದು ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರುಷ ತಪ್ಪದೆ ನೇವಿುತವಾದ ಕಾಲದಲ್ಲಿ ಆಚರಿಸಬೇಕು ಎಂದು ಬರೆದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮತ್ತು ಪತ್ರದಲ್ಲಿ ಪೂರಿಮ್ ಹಬ್ಬವನ್ನು ಆಚರಿಸಲು ಪ್ರಾರಂಭಿಸಿರಿ ಎಂದೂ ಬರೆದಿದ್ದನು. ಈ ಹಬ್ಬವನ್ನು ಯಾವ ದಿನ ಆಚರಿಸಬೇಕು ಎಂಬುದನ್ನೂ ನಮೂದಿಸಿದನು. ಈ ಎರಡು ವಿಶ್ರಾಂತಿ ದಿನಗಳನ್ನು ತಮಗೂ ತಮ್ಮ ಸಂತಾನಗಳವರಿಗೂ ಖಾಯಂಗೊಳಿಸಲು ಯೆಹೂದಿಯಾದ ಮೊರ್ದೆಕೈಯೂ ರಾಣಿ ಎಸ್ತೇರಳೂ ಯೆಹೂದ್ಯರಿಗೆ ಒಂದು ಆಜ್ಞೆಯನ್ನು ಹೊರಡಿಸಿದರು. ತಮಗೆ ಸಂಬಂಧಿಸಿದ ಕೆಟ್ಟಸಂಗತಿಗಳನ್ನು ನೆನಪಿಗೆ ತಂದುಕೊಂಡು ಬೇರೆ ವಿಶ್ರಾಂತಿ ದಿನಗಳಲ್ಲಿ ಉಪವಾಸವಿದ್ದು ಗೋಳಾಡುವಂತೆ ಈ ಹಬ್ಬದ ದಿನಗಳಲ್ಲಿಯೂ ಅವರು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:31
4 ತಿಳಿವುಗಳ ಹೋಲಿಕೆ  

ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.


ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು