Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸರ್ವಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೊರ್ದೆಕೈ ಅರಮನೆಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದನು. ಸಂಸ್ಥಾನಗಳಲ್ಲಿರುವವರೆಲ್ಲರೂ ಅವನ ಪ್ರಖ್ಯಾತಿಯ ಬಗ್ಗೆ ಕೇಳಿದ್ದರು. ದಿನೇದಿನೇ ಮೊರ್ದೆಕೈ ಬಲಶಾಲಿಯಾಗುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:4
14 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.


ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ, ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರಗಳು ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.


ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.


ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು