Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:18
23 ತಿಳಿವುಗಳ ಹೋಲಿಕೆ  

“ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;


ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.


ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.


ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


“ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.


ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.


ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.


ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.


ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು