Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ‌ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ದಕ್ಷಿಣಪ್ರಾಂತದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು; ಇಳಕಲಿನ ಪ್ರದೇಶದವರು ಫಿಲಿಷ್ಟಿಯವನ್ನೂ ಎಫ್ರಾಯೀವಿುನ ಭೂವಿುಯನ್ನೂ ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು; ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ನೆಗೆವಿನ ಜನರು ಏಸಾವಿನ ಪರ್ವತಗಳಲ್ಲಿ ವಾಸಿಸುವರು. ಬೆಟ್ಟದ ಕೆಳಗೆ ವಾಸಿಸುವವರು ಫಿಲಿಷ್ಟಿಯರ ದೇಶವನ್ನು ಆಕ್ರಮಿಸುವರು. ಎಫ್ರಾಯೀಮ್ ಮತ್ತು ಸಮಾರ್ಯದ ಜನರು ಜೀವಿಸುವರು. ಗಿಲ್ಯಾದ್ ಪ್ರಾಂತ್ಯವು ಬೆನ್ಯಾಮೀನರಿಗೆ ಸೇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದಕ್ಷಿಣದವರು ಏಸಾವನ ಬೆಟ್ಟವನ್ನೂ ಬಯಲಿನವರು ಫಿಲಿಷ್ಟಿಯರ ದೇಶವನ್ನೂ ಸ್ವತಂತ್ರಿಸಿಕೊಳ್ಳುವರು. ಎಫ್ರಾಯೀಮಿನ ಹೊಲಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನಮಾಡಿಕೊಳ್ಳುವರು ಬೆನ್ಯಾಮೀನನು ಗಿಲ್ಯಾದನ್ನು ವಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:19
33 ತಿಳಿವುಗಳ ಹೋಲಿಕೆ  

ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ.


ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.


ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.


ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.


ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.


ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.


ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.


ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.


ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ .


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.


ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ


ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,


ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.


ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,


ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು