ಓಬದ್ಯ 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸೆರೆಹೋಗಿರುವ ಇಸ್ರಯೇಲಿನ ಸೈನಿಕರು ಕಾನಾನ್ ನಾಡನ್ನು ಚಾರೆಪತಿನವರೆಗೆ ವಶಪಡಿಸಿಕೊಳ್ಳುವರು. ಸೆಪಾರದ ಎಂಬಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸೆರೆಹೋಗಿರುವ ಆ ದಂಡಿನ ಇಸ್ರಾಯೇಲ್ಯರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು; ಸೆಪಾರದಿನಲ್ಲಿ ಸೆರೆಯಾಗಿರುವ ಯೆರೂಸಲೇವಿುನವರು ದಕ್ಷಿಣಪ್ರಾಂತದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸೆರೆ ಒಯ್ಯಲ್ಪಟ್ಟ ಇಸ್ರೇಲರು ಚಾರೆಪ್ತದವರೆಗೆ ಕಾನಾನ್ ದೇಶವನ್ನು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ನೆಗೆವಿನ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಚಾರೆಪತಿನವರೆಗೂ ಇರುವ ಪ್ರದೇಶವನ್ನು ಕಾನಾನ್ಯರಲ್ಲಿರುವ ಇಸ್ರಾಯೇಲ್ ಸೆರೆವಾಸಿಗಳು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿರುವ ಯೆರೂಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.