ಓಬದ್ಯ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಉನ್ನತಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ - ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು ಅಂದುಕೊಳ್ಳುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು. ನೀನು ಎತ್ತರವಾದ ಬೆಟ್ಟದಂಚಿನ ಗುಹೆಗಳಲ್ಲಿ ವಾಸಿಸುವೆ. ನಿನ್ನ ಮನೆಯು ಪರ್ವತಗಳಲ್ಲಿದೆ. ಆದ್ದರಿಂದ ನೀನು ನಿನ್ನಲ್ಲಿ ಹೇಳಿಕೊಳ್ಳುವದೇನೆಂದರೆ, ‘ಯಾರೂ ನನ್ನನ್ನು ಕೆಳಗೆ ಭೂಮಿಯ ಮೇಲೆ ಇಳಿಸಲಾರರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ಅಧ್ಯಾಯವನ್ನು ನೋಡಿ |