ಕೀರ್ತನೆಗಳು 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು. ಅಧ್ಯಾಯವನ್ನು ನೋಡಿ |