Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಊರು ಸಂದುಗೊಂದುಗಳಲೆ ಅವಿತಿದ್ದು I ನಿರ್ಗತಿಕರಿಗಾಗಿ ಅಲ್ಲೆ ಕಾದಿದ್ದು I ಕೊಲೆಗೈವನು ಮರೆಯಲ್ಲೆ ಮೇಲೆಬಿದ್ದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವದಕ್ಕೆ ಸಮಯ ನೋಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರುನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:8
14 ತಿಳಿವುಗಳ ಹೋಲಿಕೆ  

ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.


ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,


ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.


ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.


ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.


ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.


ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.


ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು.


ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು