Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 101:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನ ಬಿಟ್ಟು ತೊಲಗಲಿ ಮೂರ್ಖತನ I ನನಗೆ ಹತ್ತದೆಯಿರಲಿ ಕೆಟ್ಟತನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೂರ್ಖತನವು ನನ್ನನ್ನು ಬಿಟ್ಟುಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿನಗೆ ಯಥಾರ್ಥನಾಗಿರುವೆನು; ದುಷ್ಕೃತ್ಯಗಳನ್ನು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೂರ್ಖಜನರು ನನ್ನಿಂದ ದೂರವಿರುವರು; ದುಷ್ಟತನವನ್ನು ಅರಿಯದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 101:4
15 ತಿಳಿವುಗಳ ಹೋಲಿಕೆ  

ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.


ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.


ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.


ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.


ಅವರು ನನ್ನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ ಗೋಡೆಯಲ್ಲಿದ್ದ ಒಂದು ಕಿಟಕಿಯಿಂದ ಇಳಿಸಿಬಿಟ್ಟರು. ಹೀಗೆ ಅವನ ಕೈಯಿಂದ ತಪ್ಪಿಸಿಕೊಂಡು ಓಡಿಹೋದೆನು.


ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.


ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.


ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು, ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು