Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನೇ, ನೀನಾದರೋ ಎಂದೆಂದಿಗೂ ಜೀವಿಸುವೆ! ನಿನ್ನ ಹೆಸರು ಶಾಶ್ವತವಾದದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನೀವು ಯೆಹೋವ ದೇವರೇ, ಎಂದೆಂದಿಗೂ ಇರುತ್ತೀರಿ; ನಿಮ್ಮ ಪ್ರಸಿದ್ಧ ಕಾರ್ಯಗಳು ತಲತಲಾಂತರಕ್ಕೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:12
15 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.


ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.


ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.


ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;


ನಾವಾದರೋ ನಿನ್ನೆ ಹುಟ್ಟಿದವರು, ನಮಗೆ ಏನೂ ತಿಳಿಯದು. ಭೂಲೋಕದಲ್ಲಿನ ನಮ್ಮ ದಿನಗಳು ನೆರಳಿನಂತಿವೆಯಷ್ಟೆ.


ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.


ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.


ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು