Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ. ಆದುದರಿಂದ, “ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಎಂತಲೆ ನಾನು : “ಅರ್ಧಾಯುಷ್ಯದಲೆ ನನ್ನೊಯ್ಯಬೇಡ ದೇವಾ I ತಲತಲಾಂತರದವರೆಗೂ ನಿನ್ನ ವರುಷಗಳು ಉಳಿದಿವೆಯಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನ ಆಯುಷ್ಯವನ್ನು ಕಡಿಮೆಮಾಡಿ ಬಿಟ್ಟಿದ್ದಾನೆ. ಆದದರಿಂದ - ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಕ್ಕೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ನಾನು ಇಂತೆಂದೆನು: “ಯೌವನಸ್ಥನಾಗಿರುವಾಗಲೇ ನನ್ನನ್ನು ಸಾಯಿಸಬೇಡ. ದೇವರೇ, ನೀನು ಶಾಶ್ವತವಾಗಿ ಜೀವಿಸುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ನಾನು, “ನನ್ನ ದೇವರೇ, ನನ್ನ ಆಯುಷ್ಯದ ಮಧ್ಯದಲ್ಲಿ ನನ್ನನ್ನು ತೆಗೆದುಕೊಳ್ಳಬೇಡಿರಿ; ನಿಮ್ಮ ವರ್ಷಗಳು ತಲತಲಾಂತರಗಳಿಗೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:24
10 ತಿಳಿವುಗಳ ಹೋಲಿಕೆ  

ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.


ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.


ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ.


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು