Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ನೀತಿಯನ್ನು ಸಾಧಿಸುವವನಾಗಿ, ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಾಧಿಸುವನು ಪ್ರಭು ನ್ಯಾಯನೀತಿಯನು I ದೊರಕಿಸುವನು ಶೋಷಿತರಿಗೆ ನ್ಯಾಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ನೀತಿಯನ್ನು ಸಾಧಿಸುವವನಾಗಿ ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ನೀತಿವಂತನಾಗಿದ್ದಾನೆ. ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಕುಗ್ಗಿದವರೆಲ್ಲರಿಗೂ ನೀತಿಯನ್ನೂ, ನ್ಯಾಯವನ್ನೂ ಕಾರ್ಯರೂಪಕ್ಕೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:6
23 ತಿಳಿವುಗಳ ಹೋಲಿಕೆ  

ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.


ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.


ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.


ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.


ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು