Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಗೂಡುಕಟ್ಟಿಕೊಳ್ಳುವುವು ಹಕ್ಕಿಗಳಾ ಮರಗಳಲಿ I ವಾಸಮಾಡುವುವು ಕೊಕ್ಕರೆಗಳು ತುರಾಯಿಮರಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪಕ್ಷಿಗಳು ಗೂಡುಗಳನ್ನು ಆ ಮರಗಳಲ್ಲಿ ಕಟ್ಟಿಕೊಳ್ಳುತ್ತವೆ. ದೊಡ್ಡ ಕೊಕ್ಕರೆಗಳು ತುರಾಯಿ ಮರಗಳಲ್ಲಿ ಜೀವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ತುರಾಯಿ ಗಿಡಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:17
8 ತಿಳಿವುಗಳ ಹೋಲಿಕೆ  

ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.


ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.


ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.


ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,


ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!


ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು