Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I ಅದೆಂದಿಗೂ ಕದಲದಂತೆ ಮಾಡಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭೂವಿುಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಭೂಮಿಯನ್ನು ನೀನು ಅಸ್ತಿವಾರದ ಮೇಲೆ ಕಟ್ಟಿರುವುದರಿಂದ ಅದೆಂದಿಗೂ ನಾಶವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯುಗಯುಗಾಂತರಗಳಿಗೂ ಅದು ಕದಲದ ಹಾಗೆ, ದೇವರು ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಸ್ಥಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:5
14 ತಿಳಿವುಗಳ ಹೋಲಿಕೆ  

ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.


ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.


ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.


ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.


ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.


ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು