Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು. ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:25
11 ತಿಳಿವುಗಳ ಹೋಲಿಕೆ  

ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.


ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.


ತರುವಾಯ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು.


ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.


ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು