Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳಿರಿ. ಆತನ ಮಹತ್ಕಾರ್ಯಗಳನ್ನೂ ವಿವೇಕದ ನಿರ್ಧಾರಗಳನ್ನೂ ಜ್ಞಾಪಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:5
13 ತಿಳಿವುಗಳ ಹೋಲಿಕೆ  

ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.


ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.


ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು